ವಿಷಯಕ್ಕೆ ಹೋಗಿ

ಚೊಚ್ಚಲ ಕೃತಿ ಪ್ರಕಟಣೆಗೆ ಅರ್ಜಿ ಆಹ್ವಾನ - ಕನ್ನಡ ಪುಸ್ತಕ ಪ್ರಾಧಿಕಾರ

          (ವಿಷಯ ಕೃಪೆ : ಕನ್ನಡ ಪುಸ್ತಕ ಪ್ರಾಧಿಕಾರ)

ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ.15,000-00 ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ / ಸ್ನಾತಕೋತ್ತರ ಪದವಿ(PHD)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ / ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ್ದರಿಂದ ತಮ್ಮ ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವುದು.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:15.02.2022ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 – ಅವರಿಗೆ ಕಳುಹಿಸಿಕೊಡಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ :
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ,
ಮೊದಲನೇ ಮಹಡಿ, ಜೆ.ಸಿ. ರಸ್ತೆ,
ಬೆಂಗಳೂರು -560002

ವೆಬ್ಸೈಟ್ www.kannadapustakapradhikara.com,
ದೂರವಾಣಿ ಸಂಖ್ಯೆ: 080-22484516 / 22107704

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಓದಬೇಕಾದ ಕನ್ನಡದ ಮಹತ್ತರ ಪುಸ್ತಕಗಳು - ಅವ್ವ ಪುಸ್ತಕಾಲಯ

" ಓದಬೇಕಾದ ಕೆಲವು ಕನ್ನಡ ಸಾಹಿತ್ಯ ಪುಸ್ತಕಗಳು " (ಇದು ನನ್ನ ಸುತ್ತಲಿನವರ ಅಭಿಪ್ರಾಯದ ಮೇರೆಗೆ ಓದುಗರಲ್ಲಿ ಅಭಿರುಚಿ ಹೆಚ್ಚಿಸಲು ಕಟ್ಟಿರುವ ಪಟ್ಟಿ. ನೀವು ಓದಿರುವ ಬೆಸ್ಟ್ ಪುಸ್ತಕಗಳು ಬಿಟ್ಟುಹೋಗಿದ್ದರೆ ದಯವಿಟ್ಟು ಸೇರಿಸಿ) ತೇಜಸ್ವಿ : ಮಹಾಪಲಾಯನ ಕರ್ವಾಲೋ ಪ್ಯಾಪಿಲಾನ್ ಚಿದಂಬರ ರಹಸ್ಯ ಜುಗಾರಿಕ್ರಾಸ್ ಭಯಾನಕ ನರಭಕ್ಷಕ ಕಿರಗೂರಿನ ಗಯ್ಯಾಳಿಗಳು ಅಬಚೂರಿನ ಫೋಸ್ಟಾಫೀಸು ಕೃಷ್ಣೇಗೌಡನ ಆನೆ ಅಣ್ಣನ ನೆನಪು ಹೊಸ ವಿಚಾರಗಳು  ಕೆ ಎನ್ ಗಣೇಶಯ್ಯ : ಶಾಲಭಂಜಿಕೆ ಆರ್ಯವೀರ್ಯ ಗುಡಿಮಲ್ಲಮ್ ಚಿತಾದಂತ ಬೆಳ್ಳಿಕಾಳಬಳ್ಳಿ ಶಿಲಾಕುಲವಲಸೆ ಕನಕಮುಸುಕು  ಕರಿಸಿರಿಯಾನ ಕಪಿಲಿಪಿಸಾರ ಎಸ್ ಎಲ್ ಬಿ : ಭಿತ್ತಿ ವಂಶವೃಕ್ಷ ಗೃಹಭಂಗ ನಾಯಿ ನೆರಳು ಕವಲು ಯಾನ ಸಾರ್ಥ ಪರ್ವ ದಾಟು ಮಂದ್ರ ಆವರಣ  ಅನ್ವೇಷಣ ತ.ರಾ.ಸು : ನಾಗರಹಾವು ಮಸಣದ ಹೂ ಹಂಸಗೀತೆ ಶಿಲ್ಪಶ್ರೀ ರಕ್ತರಾತ್ರಿ ತಿರುಗುಬಾಣ ದುರ್ಗಾಸ್ತಮಾನ  ಗಿರೀಶ್ ಖಾರ್ನಾಡ್ : ಆಡಾಡತ ಆಯುಷ್ಯ ತುಘಲಕ್ ತಲೆದಂಡ ಹಯವದನ ನಾಗಮಂಡಲ ಯಯಾತಿ  ವಸುದೇಂಧ್ರ : ಮೋಹನಸ್ವಾಮಿ ಹಂಪಿ ಎಕ್ಸ್ ಪ್ರೆಸ್ ತೇಜೋ ತುಂಗಭದ್ರ ನಮ್ಮಮ್ಮ ಅಂದ್ರೆ ನಂಗಿಷ್ಟ ಐದು ಪೈಸೆ ವರದಕ್ಷಿಣೆ  ಜೋಗಿ : L ಅಶ್ವತ್ಥಾಮನ್ ಬೆಂಗಳೂರು ಸೀರೀಸ್  ಹಲಗೆ ಬಳಪ ಜಾನಕಿ ಕಾಲಂ ಚಂ. ಶೇ. ಕಂ : ಜೋಕುಮಾರಸ್ವಾಮಿ ಸಂಗ್ಯಾಬಾಳ್ಯ ಸಾಂಬಶಿವ ಪ್ರಹಸನ ಸಿರಿಸಂಪಿಗೆ ಮಹಾಮಾಯಿ ಸಿಂಗಾರೆವ್ವ & ಅರಮನೆ...

ಸಾಹಿತ್ಯ ಸ್ಪರ್ಧೆಗಳು 2023

ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.

Avva Pustakalaya

ಅವ್ವ ಪುಸ್ತಕಾಲಯ ಸಾಹಿತ್ಯ ಬಳಗವು 2020 ರ ಏಪ್ರಿಲ್ 04 ರಂದು ಶ್ರೀಮಾನ್ ಲೇಟ್ ನಾರಸಯ್ಯ ಅವರ ಸ್ಮರಣಾರ್ಥವಾಗಿ ರೂಪುಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಓದುಗರ ಬಳಗವನ್ನು ಹೊಂದಿದೆ. ಇದು ಡಿಜಿಠಲ್ ಗ್ರಂಥಾಲಯವಾಗಿದ್ದು, ಓದಿನ ಅಭಿರುಚಿ ಹಬ್ಬಿಸಲು ಬಹಳಷ್ಟು ಸಾಹಿತ್ಯ ಚಟುವಟಿಕೆಗಳು ಮತ್ತು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ಜುಲೈ ತಿಂಗಳಲ್ಲಿ ಪ್ರಕಟಿತ ಕೃತಿಗಳನ್ನು ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿಗೆ ಆಹ್ವಾನಿಸಲಾಗುವುದು. ಆಯ್ಕೆಯಾದ ಕೃತಿಗಳಿಗೆ ಪ್ರಶಸ್ತಿಯ ಜೊತೆಗೆ ಐದು ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಹಂಚಿ, ಅವರ ಪುಸ್ತಕಗಳನ್ನು ಅವ್ವ ಪುಸ್ತಕಾಲಯ ವೇದಿಕೆಯ ಮುಖೇನ ಓದುಗರಿಗೆ ಮುಟ್ಟಿಸಲಾಗುವುದು . ಈಗಾಗಲೇ ಅವ್ವ ಪುಸ್ತಕಾಲಯದಿಂದ ಪ್ರಧಾನ ಕಾರ್ಯದರ್ಶಿಗಳಾದ  ಯುವಲೇಖಕ ಅನಂತ ಅವರ ಮೂರು ಕೃತಿಗಳು ಪ್ರಕಟವಾಗಿದ್ದು ಅವುಗಳು ಓದುಗರಿಗೆ ರಿಯಾಯಿತಿ ದರದಲ್ಲಿ ಸಿಗುತ್ತಿವೆ. ಓದುಗರು ನಮ್ಮನ್ನು ಸಂಪರ್ಕಿಸುವ ಮೂಲಕ ಪುಸ್ತಕಗಳನ್ನು ಕೊಂಡು ಓದಬಹುದು. ಮತ್ತು ನಮ್ಮ ಸಾಹಿತ್ಯ ಚಟುವಟಿಕೆಗಳು ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. 1). ಅವ್ವ ಪುಸ್ತಕಾಲಯ #189, ಕೆಂಚನಹಳ್ಳಿ ಅಂಚೆ ಹುಲಿಯೂರುದುರ್ಗ ಹೋಬಳಿ ಕುಣಿಗಲ್ ತಾಲ್ಲೂಕು ತುಮಕೂರು - 572123 ಮೊ : 8548948660 Mail :  avvapustakaalaya@gmail.com 2).  Facebook....