ಅವ್ವ ಪುಸ್ತಕಾಲಯ ಸಾಹಿತ್ಯ ಬಳಗವು 2020 ರ ಏಪ್ರಿಲ್ 04 ರಂದು ಶ್ರೀಮಾನ್ ಲೇಟ್ ನಾರಸಯ್ಯ ಅವರ ಸ್ಮರಣಾರ್ಥವಾಗಿ ರೂಪುಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಓದುಗರ ಬಳಗವನ್ನು ಹೊಂದಿದೆ. ಇದು ಡಿಜಿಠಲ್ ಗ್ರಂಥಾಲಯವಾಗಿದ್ದು, ಓದಿನ ಅಭಿರುಚಿ ಹಬ್ಬಿಸಲು ಬಹಳಷ್ಟು ಸಾಹಿತ್ಯ ಚಟುವಟಿಕೆಗಳು ಮತ್ತು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ಜುಲೈ ತಿಂಗಳಲ್ಲಿ ಪ್ರಕಟಿತ ಕೃತಿಗಳನ್ನು ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿಗೆ ಆಹ್ವಾನಿಸಲಾಗುವುದು. ಆಯ್ಕೆಯಾದ ಕೃತಿಗಳಿಗೆ ಪ್ರಶಸ್ತಿಯ ಜೊತೆಗೆ ಐದು ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಹಂಚಿ, ಅವರ ಪುಸ್ತಕಗಳನ್ನು ಅವ್ವ ಪುಸ್ತಕಾಲಯ ವೇದಿಕೆಯ ಮುಖೇನ ಓದುಗರಿಗೆ ಮುಟ್ಟಿಸಲಾಗುವುದು. ಈಗಾಗಲೇ ಅವ್ವ ಪುಸ್ತಕಾಲಯದಿಂದ ಪ್ರಧಾನ ಕಾರ್ಯದರ್ಶಿಗಳಾದ ಯುವಲೇಖಕ ಅನಂತ ಅವರ ಮೂರು ಕೃತಿಗಳು ಪ್ರಕಟವಾಗಿದ್ದು ಅವುಗಳು ಓದುಗರಿಗೆ ರಿಯಾಯಿತಿ ದರದಲ್ಲಿ ಸಿಗುತ್ತಿವೆ. ಓದುಗರು ನಮ್ಮನ್ನು ಸಂಪರ್ಕಿಸುವ ಮೂಲಕ ಪುಸ್ತಕಗಳನ್ನು ಕೊಂಡು ಓದಬಹುದು. ಮತ್ತು ನಮ್ಮ ಸಾಹಿತ್ಯ ಚಟುವಟಿಕೆಗಳು ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು.
1). ಅವ್ವ ಪುಸ್ತಕಾಲಯ
#189, ಕೆಂಚನಹಳ್ಳಿ ಅಂಚೆ
ಹುಲಿಯೂರುದುರ್ಗ ಹೋಬಳಿ
ಕುಣಿಗಲ್ ತಾಲ್ಲೂಕು
ತುಮಕೂರು - 572123
ಮೊ : 8548948660
Mail : avvapustakaalaya@gmail.com
2). Facebook. Group
3). Whatsapp. Group
4). Instagram
5). Youtube
6). Clubhouse
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ