ವಿಷಯಕ್ಕೆ ಹೋಗಿ

ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ 2022 - ಕೃತಿಗಳ ಆಹ್ವಾನ - ಅವ್ವ ಪುಸ್ತಕಾಲಯ


2022 ರ "ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ" ಗಾಗಿ ಪ್ರಕಟಿತ ಕೃತಿಗಳ ಆಹ್ವಾನ 

* ಅವ್ವ ಪುಸ್ತಕಾಲಯ ಸಾಹಿತ್ಯ ಬಳಗ ಕುಣಿಗಲ್ ವತಿಯಿಂದ "ಶ್ರೀಮಾನ್ ಲೇ. ನರಸಯ್ಯ" ಅವರ ಸ್ಮರಣಾರ್ಥ ಕೊಡಮಾಡುವ "ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ" ಗಾಗಿ 2020 ರ ಜುಲೈ ತಿಂಗಳಿಂದ 2022 ರ ಜೂನ್ ತಿಂಗಳವರೆ ಪ್ರಕಟವಾಗಿರುವ ಕನ್ನಡ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಪ್ರಶಸ್ತಿ ಪಡೆದವರು ಈ ವರ್ಷದ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. 

* 2022 ರ ಆಗಸ್ಟ್ 31 ರೊಳಗೆ ತಮ್ಮ ಕೃತಿಯ ಮೂರು ಪ್ರತಿಗಳನ್ನು  ಪ್ರತ್ಯೇಕ ಹಾಳೆಯಲ್ಲಿ ಬರೆದ ಸ್ವಪರಿಚಯ, ವಿಳಾಸ ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಕೆಳಗಿನ ವಿಳಾಸಕ್ಕೆ ಅಂಚೆಯ ಮೂಲಕವೇ (ರಿಜಿಸ್ಟರ್ ಪೋಸ್ಟ್) ತಮ್ಮ ಕೃತಿಗಳನ್ನು ಕಳಿಸಬಹುದಾಗಿದೆ. ಒಬ್ಬ ಲೇಖಕ ತನ್ನ ಎರಡು ಕೃತಿಗಳ ಮೂಲಕ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. 

* ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿಲ್ಲ. ಆತ್ಮಕತೆ, ವಿಮರ್ಶಾ ಸಂಕಲನ, ಪಿ.ಹೆಚ್.ಡಿ ಪ್ರಬಂಧಗಳು, ಅನುವಾದ ಹಾಗೂ ಸಂಶೋಧನಾ ಕೃತಿಗಳನ್ನು ಹೊರತುಪಡಿಸಿ ಸಾಹಿತ್ಯದ ಯಾವುದೇ ಪ್ರಕಾರದ (ಕತೆ, ಕಾದಂಬರಿ, ಕವಿತೆ, ಗಜಲ್, ಹನಿಗವನ, ನಾಟಕ, ಲೇಖನ, ಪ್ರಬಂಧ, ಪ್ರವಾಸ ಕಥನ ಇತ್ಯಾದಿ) ಕೃತಿಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

* ನವೆಂಬರ್ ತಿಂಗಳಲ್ಲಿ ಕಿರುಪಟ್ಟಿ ಬಿಡುಗಡೆ ಮಾಡಲಾಗುವುದು. ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅವ್ವ ಪುಸ್ತಕಾಲಯ ತಂಡವನ್ನು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್, ಬ್ಲಾಗ್, ಕ್ಲಬ್ ಹೌಸ್ ಗಳಲ್ಲಿ ಹಿಂಬಾಲಿಸಬಹುದು.
ಮೇಲ್ : avvapustakaalaya@gmail.com 

* ಬಹುಮಾನ ವಿವರ :
1). ಮೊದಲ ಸ್ಥಾನ ಪಡೆದ ಸೃಜನಶೀಲ ಕೃತಿಗೆ ಈ ವರ್ಷದ ಪ್ರಶಸ್ತಿಯ ಜೊತೆಗೆ 1501/- ರೂಗಳ ನಗದು ಬಹುಮಾನ, 1500/- ರೂ ಮೌಲ್ಯದ ಪುಸ್ತಕ ಬಹುಮಾನ ನೀಡಿ ಗೌರವಿಸಲಾಗುವುದು.

2). ಸೃಜನಶೀಲವೆನಿಸಿದ ಎರಡು ಕೃತಿಗಳಿಗೆ ತಲಾ 500/- ರೂಗಳ ನಗದು ಬಹುಮಾನ, 500/- ರೂ ಮೌಲ್ಯದ ಪುಸ್ತಕ ಬಹುಮಾನ, ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಗುವುದು. 

* ತಮ್ಮ ಕೃತಿಗಳನ್ನು ಕಳಿಸಬೇಕಾದ ಅಂಚೆ ವಿಳಾಸ : 
ಅವ್ವ ಪುಸ್ತಕಾಲಯ
#189, ಗ್ರಾಮ ನಂ.೦೧ ನಾಗರೀಕಸೇವಾಕೇಂದ್ರ,
ಕೆಂಚನಹಳ್ಳಿ ಅಂಚೆ, ಹುಲಿಯೂರುದುರ್ಗ ಹೋಬಳಿ,
ಕುಣಿಗಲ್ ತಾಲ್ಲೂಕು, ತುಮಕೂರು ಜಿಲ್ಲೆ - 572123
ಮೊ : 8548948660

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಸಾಹಿತ್ಯ ಸ್ಪರ್ಧೆಗಳು 2023

ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.

ಓದಬೇಕಾದ ಕನ್ನಡದ ಮಹತ್ತರ ಪುಸ್ತಕಗಳು - ಅವ್ವ ಪುಸ್ತಕಾಲಯ

" ಓದಬೇಕಾದ ಕೆಲವು ಕನ್ನಡ ಸಾಹಿತ್ಯ ಪುಸ್ತಕಗಳು " (ಇದು ನನ್ನ ಸುತ್ತಲಿನವರ ಅಭಿಪ್ರಾಯದ ಮೇರೆಗೆ ಓದುಗರಲ್ಲಿ ಅಭಿರುಚಿ ಹೆಚ್ಚಿಸಲು ಕಟ್ಟಿರುವ ಪಟ್ಟಿ. ನೀವು ಓದಿರುವ ಬೆಸ್ಟ್ ಪುಸ್ತಕಗಳು ಬಿಟ್ಟುಹೋಗಿದ್ದರೆ ದಯವಿಟ್ಟು ಸೇರಿಸಿ) ತೇಜಸ್ವಿ : ಮಹಾಪಲಾಯನ ಕರ್ವಾಲೋ ಪ್ಯಾಪಿಲಾನ್ ಚಿದಂಬರ ರಹಸ್ಯ ಜುಗಾರಿಕ್ರಾಸ್ ಭಯಾನಕ ನರಭಕ್ಷಕ ಕಿರಗೂರಿನ ಗಯ್ಯಾಳಿಗಳು ಅಬಚೂರಿನ ಫೋಸ್ಟಾಫೀಸು ಕೃಷ್ಣೇಗೌಡನ ಆನೆ ಅಣ್ಣನ ನೆನಪು ಹೊಸ ವಿಚಾರಗಳು  ಕೆ ಎನ್ ಗಣೇಶಯ್ಯ : ಶಾಲಭಂಜಿಕೆ ಆರ್ಯವೀರ್ಯ ಗುಡಿಮಲ್ಲಮ್ ಚಿತಾದಂತ ಬೆಳ್ಳಿಕಾಳಬಳ್ಳಿ ಶಿಲಾಕುಲವಲಸೆ ಕನಕಮುಸುಕು  ಕರಿಸಿರಿಯಾನ ಕಪಿಲಿಪಿಸಾರ ಎಸ್ ಎಲ್ ಬಿ : ಭಿತ್ತಿ ವಂಶವೃಕ್ಷ ಗೃಹಭಂಗ ನಾಯಿ ನೆರಳು ಕವಲು ಯಾನ ಸಾರ್ಥ ಪರ್ವ ದಾಟು ಮಂದ್ರ ಆವರಣ  ಅನ್ವೇಷಣ ತ.ರಾ.ಸು : ನಾಗರಹಾವು ಮಸಣದ ಹೂ ಹಂಸಗೀತೆ ಶಿಲ್ಪಶ್ರೀ ರಕ್ತರಾತ್ರಿ ತಿರುಗುಬಾಣ ದುರ್ಗಾಸ್ತಮಾನ  ಗಿರೀಶ್ ಖಾರ್ನಾಡ್ : ಆಡಾಡತ ಆಯುಷ್ಯ ತುಘಲಕ್ ತಲೆದಂಡ ಹಯವದನ ನಾಗಮಂಡಲ ಯಯಾತಿ  ವಸುದೇಂಧ್ರ : ಮೋಹನಸ್ವಾಮಿ ಹಂಪಿ ಎಕ್ಸ್ ಪ್ರೆಸ್ ತೇಜೋ ತುಂಗಭದ್ರ ನಮ್ಮಮ್ಮ ಅಂದ್ರೆ ನಂಗಿಷ್ಟ ಐದು ಪೈಸೆ ವರದಕ್ಷಿಣೆ  ಜೋಗಿ : L ಅಶ್ವತ್ಥಾಮನ್ ಬೆಂಗಳೂರು ಸೀರೀಸ್  ಹಲಗೆ ಬಳಪ ಜಾನಕಿ ಕಾಲಂ ಚಂ. ಶೇ. ಕಂ : ಜೋಕುಮಾರಸ್ವಾಮಿ ಸಂಗ್ಯಾಬಾಳ್ಯ ಸಾಂಬಶಿವ ಪ್ರಹಸನ ಸಿರಿಸಂಪಿಗೆ ಮಹಾಮಾಯಿ ಸಿಂಗಾರೆವ್ವ & ಅರಮನೆ...

ಕೂರೋನಾದಲ್ಲೂ ಕರುಣಾಮಯಿ ಅಮ್ಮ - ಲೇಖನ - ಸಿಂಚನ ಜಿ ಎನ್

ಕೊರನದಲ್ಲೂ ಕರುಣಾಮಯಿ ಅಮ್ಮ " ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ಬಂಧುವಿಲ್ಲ "  ಎಂಬ ಮಾತಿನಂತೆ ಒಬ್ಬ ವ್ಯಕ್ತಿ ಎಷ್ಟೇ ದೊಡ್ಡವರಾದರೂ, ಅವರ ತಾಯಿಗೆ ಅವರು ಚಿಕ್ಕಮಗು  ಅಲ್ಲವೇ? ಈ ಕೊರೊನಾ ಕಾಲದಲ್ಲಿ ನಿಜವಾದ ದೊಡ್ಡ ತ್ಯಾಗಗಳು ನಮ್ಮೆಲ್ಲರ ತಾಯಂದಿರಿಂದ ನಡೆಯುತ್ತಿದೆ. ಬೆಳಿಗ್ಗೆ ಎದ್ದಾಗಿನಿಂದ, ಮನೆಯ ಸ್ವಚ್ಛತೆ, ಪೂಜೆ ಪುರಸ್ಕಾರ, ತಿಂಡಿ-ಊಟ, ಕಾಫಿ, ಟೀ, ಕುಟುಂಬದ ಸದಸ್ಯರ ಸ್ವಚ್ಛತೆ, ಅತಿಥಿಗಳ ಸತ್ಕಾರ, ಕುಟುಂಬದ ಆರ್ಥಿಕ ಪರಿಸ್ಥಿತಿಯ ಸುಧಾರಣೆ, ಗಂಡ ಮಕ್ಕಳ ಆರೋಗ್ಯ ಸುಧಾರಣೆ, ಮನೆಯಲ್ಲಿನ ಹಿರಿಯರ ಆರೋಗ್ಯ ಸುಧಾರಣೆ ನಿಜಕ್ಕೂ ಶ್ಲಾಘನೀಯ. ಯಾವುದೇ ಗೌರವ ಪ್ರತಿಷ್ಠೆಗಳಿಲ್ಲದೆ, ಯಾವುದೇ ಸಂಬಳವಿಲ್ಲದೆ ದುಡಿಯುವ ತ್ಯಾಗಮಯಿ ಅಮ್ಮ. ಈ ಕೊರೋನಾ ಕಾಲದಲ್ಲಿ ಇವೆಲ್ಲಾ ಕೆಲಸಗಳು ಇನ್ನಷ್ಟು ಹೆಚ್ಚಾಗಿವೆ. ಕುಟುಂಬದ ವಿವಿಧ ಸದ್ಯಸರ ವಿವಿಧ ಅಭಿರುಚಿಯ ಅಡುಗೆ, ಹಾಗೇ ವಿವಿಧ ರೀತಿಯ ಜೀವನಶೈಲಿ ರೂಪಿಸಿಕೊಳ್ಳುವುದು, ಜೊತೆಗೆ ಕುಟುಂಬಕ್ಕೆ ರೂಪಿಸಿಕೊಡುವುದು , ನಾವುಗಳೆಲ್ಲಾ ಕಲ್ಪಿಸುವಷ್ಟು ಸುಲಭವಲ್ಲ!! ಹಾಗೆಯೇ ಎಲ್ಲಾದಕ್ಕೂ ಬಹುಮುಖ್ಯವಾಗಿ ತಾಳ್ಮೆ ಬೇಕಾಗುತ್ತದೆ. ಮನೆಯಲ್ಲಿ ಚಿಕ್ಕಪುಟ್ಟ ಮಕ್ಕಳಿದ್ದರೆ ಅವರನ್ನು ಮನೆಯ ಒಳಗಡೆ ಇರಿಸಿಕೊಂಡು, ಹೊಸ ಹೊಸ ಅಭ್ಯಾಸಗಳು ಮನೆಯ ಪಾಠಗಳನ್ನು ಹೇಳಿ ಕೊಡಬೇಕಾಗುತ್ತದೆ. ದಿನಕ್ಕೊಮ್ಮೆ ಬೇಬಿ ಸಿಟ್ಟಿಂಗ್ ಟೀಚರ್ ಆಗಬೇಕಾಗುತ್ತದೆ, ತುಂಟ ಮಕ್ಕಳು ನಿಯಂತ್ರಣಕ್ಕೆ ಸಿಕ್ಕದ...