ಕೊರನದಲ್ಲೂ ಕರುಣಾಮಯಿ ಅಮ್ಮ " ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ಬಂಧುವಿಲ್ಲ " ಎಂಬ ಮಾತಿನಂತೆ ಒಬ್ಬ ವ್ಯಕ್ತಿ ಎಷ್ಟೇ ದೊಡ್ಡವರಾದರೂ, ಅವರ ತಾಯಿಗೆ ಅವರು ಚಿಕ್ಕಮಗು ಅಲ್ಲವೇ? ಈ ಕೊರೊನಾ ಕಾಲದಲ್ಲಿ ನಿಜವಾದ ದೊಡ್ಡ ತ್ಯಾಗಗಳು ನಮ್ಮೆಲ್ಲರ ತಾಯಂದಿರಿಂದ ನಡೆಯುತ್ತಿದೆ. ಬೆಳಿಗ್ಗೆ ಎದ್ದಾಗಿನಿಂದ, ಮನೆಯ ಸ್ವಚ್ಛತೆ, ಪೂಜೆ ಪುರಸ್ಕಾರ, ತಿಂಡಿ-ಊಟ, ಕಾಫಿ, ಟೀ, ಕುಟುಂಬದ ಸದಸ್ಯರ ಸ್ವಚ್ಛತೆ, ಅತಿಥಿಗಳ ಸತ್ಕಾರ, ಕುಟುಂಬದ ಆರ್ಥಿಕ ಪರಿಸ್ಥಿತಿಯ ಸುಧಾರಣೆ, ಗಂಡ ಮಕ್ಕಳ ಆರೋಗ್ಯ ಸುಧಾರಣೆ, ಮನೆಯಲ್ಲಿನ ಹಿರಿಯರ ಆರೋಗ್ಯ ಸುಧಾರಣೆ ನಿಜಕ್ಕೂ ಶ್ಲಾಘನೀಯ. ಯಾವುದೇ ಗೌರವ ಪ್ರತಿಷ್ಠೆಗಳಿಲ್ಲದೆ, ಯಾವುದೇ ಸಂಬಳವಿಲ್ಲದೆ ದುಡಿಯುವ ತ್ಯಾಗಮಯಿ ಅಮ್ಮ. ಈ ಕೊರೋನಾ ಕಾಲದಲ್ಲಿ ಇವೆಲ್ಲಾ ಕೆಲಸಗಳು ಇನ್ನಷ್ಟು ಹೆಚ್ಚಾಗಿವೆ. ಕುಟುಂಬದ ವಿವಿಧ ಸದ್ಯಸರ ವಿವಿಧ ಅಭಿರುಚಿಯ ಅಡುಗೆ, ಹಾಗೇ ವಿವಿಧ ರೀತಿಯ ಜೀವನಶೈಲಿ ರೂಪಿಸಿಕೊಳ್ಳುವುದು, ಜೊತೆಗೆ ಕುಟುಂಬಕ್ಕೆ ರೂಪಿಸಿಕೊಡುವುದು , ನಾವುಗಳೆಲ್ಲಾ ಕಲ್ಪಿಸುವಷ್ಟು ಸುಲಭವಲ್ಲ!! ಹಾಗೆಯೇ ಎಲ್ಲಾದಕ್ಕೂ ಬಹುಮುಖ್ಯವಾಗಿ ತಾಳ್ಮೆ ಬೇಕಾಗುತ್ತದೆ. ಮನೆಯಲ್ಲಿ ಚಿಕ್ಕಪುಟ್ಟ ಮಕ್ಕಳಿದ್ದರೆ ಅವರನ್ನು ಮನೆಯ ಒಳಗಡೆ ಇರಿಸಿಕೊಂಡು, ಹೊಸ ಹೊಸ ಅಭ್ಯಾಸಗಳು ಮನೆಯ ಪಾಠಗಳನ್ನು ಹೇಳಿ ಕೊಡಬೇಕಾಗುತ್ತದೆ. ದಿನಕ್ಕೊಮ್ಮೆ ಬೇಬಿ ಸಿಟ್ಟಿಂಗ್ ಟೀಚರ್ ಆಗಬೇಕಾಗುತ್ತದೆ, ತುಂಟ ಮಕ್ಕಳು ನಿಯಂತ್ರಣಕ್ಕೆ ಸಿಕ್ಕದ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ